ರಾಷ್ಟ್ರಪತಿ ಹುದ್ದೆಗೆ ಪ್ರಧಾನಿ ಮೋದಿ ಆಯ್ಕೆ ವಿಶ್ವಕ್ಕೇ ಸಂದೇಶ ರವಾನಿಸುತ್ತದೆ: ನಜ್ಮಾ ಹೆಫ್ತುಲ್ಲಾ

ನಜ್ಮಾ ಹೆಫ್ತುಲ್ಲಾ, ಈ ಬಗ್ಗೆ ಹೇಳಿಕೆ ನೀಡಿದ್ದು, ರಾಷ್ಟ್ರಪತಿ ಹುದ್ದೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆ ಇಡೀ ವಿಶ್ವಕ್ಕೇ ಸಂದೇಶ ನೀಡಲಿದೆ ಎಂದು ಹೇಳಿದ್ದಾರೆ.
ನಜ್ಮಾ ಹೆಫ್ತುಲ್ಲಾ
ನಜ್ಮಾ ಹೆಫ್ತುಲ್ಲಾ
ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುತ್ತಿದ್ದಂತೆಯೇ ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆ ಯಾರಾಗಲಿದ್ದಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ. ಎ ಡೈಲಾಗ್ ವಿತ್ ಜೆಸಿ ಎಂಬ ಸುದ್ದಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಸಂದರ್ಶನ ನೀಡಿದಿರುವ ನಜ್ಮಾ ಹೆಫ್ತುಲ್ಲಾ, ಈ ಬಗ್ಗೆ ಹೇಳಿಕೆ ನೀಡಿದ್ದು, ರಾಷ್ಟ್ರಪತಿ ಹುದ್ದೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆ ಇಡೀ ವಿಶ್ವಕ್ಕೇ ಸಂದೇಶ ನೀಡಲಿದೆ ಎಂದು ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ವೈಖರಿಯನ್ನು ಮೆಚ್ಚಿಕೊಂಡಿರುವ ನಜ್ಮಾ ಹೆಫ್ತುಲ್ಲಾ, ಪ್ರಧಾನಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯ ತಮಗೆ ಅತ್ಯಂತ ಮೆಚ್ಚುಗೆಯಾಗಿದೆ ಎಂದಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ತ್ರಿವಳಿ ತಲಾಖ್ ಬಗ್ಗೆಯೂ ಮಾತನಾಡಿರುವ ತ್ರಿವಳಿ ತಲಾಖ್ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮ್ ಮಹಿಳೆಯರ ಪರವಾದ ನಿಲುವು ಹೊಂದಿದ್ದಾರೆ ಎಂದು ಹೇಳಿದ್ದಾರೆ. 
ಇನ್ನು ತಮ್ಮನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡುವುದರ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ರಾಷ್ಟ್ರಪತಿ ಚುನಾವಣೆಯ ಅವಕಾಶವನ್ನು ವ್ಯರ್ಥ ಮಾಡುವುದಿಲ್ಲ ಅವರ ಆಯ್ಕೆ ವಿಶ್ವಕ್ಕೆ ಸಂದೇಶ ನೀಡುವಂಥದ್ದಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com