1 ಕೋಟಿ ರೂ ಮೌಲ್ಯದ ಹಳೆಯ 500, 1000 ರೂ ಮುಖಬೆಲೆ ನೋಟು ವಶ: ಮೂವರ ಬಂಧನ

ಒಂದು ಕೋಟಿ ರೂಪಾಯಿ ಮೌಲ್ಯದ ಹಳೆಯ 500, 1000 ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿರುವ ಥಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
500, 1000 ರೂ ನೋಟು
500, 1000 ರೂ ನೋಟು
ಥಾಣೆ: ಒಂದು ಕೋಟಿ ರೂಪಾಯಿ ಮೌಲ್ಯದ ಹಳೆಯ 500, 1000 ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿರುವ ಥಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. 
ಮುಂಬ್ರಾ ಪೊಲೀಸ್ ಠಾಣೆಯ ಅಧಿಕಾರಿಗಳು ಹಳೆಯ ನೋಟುಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿ, ಖಾಸಗಿ ಬ್ಯಾಂಕ್ ನ ಉದ್ಯೋಗಿಯೂ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಹೊಸ ನೋಟುಗಳ ಬಿಲ್ ಗಳಿಗೆ ಬದಲಾಗಿ ಹಳೆಯ ನೋಟುಗಳನ್ನು ಬದಲಾವಣೆ ಮಾಡುವುದಕ್ಕೆ ಸಂಚು ರೂಪಿಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. 
ಪೊಲೀಸರು ಬಂಧಿತರ ವಿರುದ್ಧ ಪ್ರಕರಣ ದಾಖಲಿಸಿದ್ದು ವಿಚಾರಣೆ ಮುಂದುವರೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com