ಕಾಶ್ಮೀರದಲ್ಲಿ ಉಗ್ರಗಾಮಿಗಳನ್ನು ಸದೆಬಡಿಯಲು ಸೇನಾಪಡೆ ಸನ್ನದ್ಧವಾಗಿದೆ: ಜೇಟ್ಲಿ

ಕಣಿವೆ ದಾಟಿ ಬರುವ ಉಗ್ರಗಾಮಿಗಳನ್ನು ಸದೆಬಡಿಯಲು ಭಾರತೀಯ ಸೇನಾ ಪಡೆ...
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಕಣಿವೆ ದಾಟಿ ಬರುವ ಉಗ್ರಗಾಮಿಗಳನ್ನು ಸದೆಬಡಿಯಲು ಭಾರತೀಯ ಸೇನಾ ಪಡೆ ಸಂಪೂರ್ಣವಾಗಿ ಸಿದ್ದವಾಗಿದೆ ಎಂದು ಕೇಂದ್ರ ರಕ್ಷಣಾ ಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಉಗ್ರರು ಯಾವುದೇ ರೀತಿಯಲ್ಲಿ ಒಳನುಸುಳುವುದನ್ನು ಪರೀಕ್ಷಿಸಲು ನಮ್ಮ ಸೇನಾಪಡೆ ಮತ್ತು ಸೇನೆ ಸರ್ವ ರೀತಿಯಿಂದಲೂ ಸನ್ನದ್ಧವಾಗಿದೆ. ಯಾವುದೇ ಸನ್ನಿವೇಶದಲ್ಲಿಯೂ ಭಾರತದ ಪ್ರಾದೇಶಿಕ ಸಾರ್ವಭೌಮತ್ವ ಉಲ್ಲಂಘನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ಉಗ್ರಗಾಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮುಖ್ಯವಾಗಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಬರುವವರ ವಿರುದ್ಧ. ಈ ಉಗ್ರಗಾಮಿಗಳೇ ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕದಡಲು ಕಾರಣರಾಗಿದ್ದಾರೆ ಎಂದು ಹೇಳಿದರು.
ನಿನ್ನೆ ಬಲಕೊಟೆ ವಲಯದಲ್ಲಿ ಕದನ ವಿರಾಮ ಉಲ್ಲಂಘನೆ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೈಟ್ಲಿ, ಇದೊಂದು ಪ್ರಚೋದನಕಾರಿ. ನಮ್ಮ ಸೇನಾ ಪಡೆಯ ತ್ಯಾಗ, ಬಲಿದಾನಗಳ ನಿಷ್ಟ್ರಯೋಜಕವಾಗುತ್ತದೆ. ಅವರ ಕಾರ್ಯತಂತ್ರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ, ಆದರೆ ನಿನ್ನೆ ನಡೆದ ಘಟನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾಶ್ಮೀರದಲ್ಲಿ ಕಳೆದ ಹಲವು ತಿಂಗಳಿನಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದ್ದು ವಿದ್ಯಾರ್ಥಿಗಳು ಪೊಲೀಸರೊಂದಿಗೆ ಕದನಕ್ಕಿಳಿದಿದ್ದಾರೆ. ರಾಜ್ಯದ ಪ್ರಕ್ಷುಬ್ಧ ವಾತಾವರಣದ ಬಗ್ಗೆ ಪ್ರತಿಕ್ರಿಯಿಸಿದ ಜೈಟ್ಲಿ, ದಕ್ಷಿಣ ಭಾರತದ ಕೆಲವೆಡೆ ಮತ್ತು ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಕೆಲವೊಂದು ಸಮಸ್ಯೆಗಳಿವೆ. ಆದರೆ ಶ್ರೀನಗರ ಸಂಪೂರ್ಣ ಶಾಂತಿಯುತವಾಗಿದೆ. ಈ ವರ್ಷ ಪ್ರವಾಸೋದ್ಯಮದಿಂದ ರಾಜ್ಯಕ್ಕೆ ಉತ್ತಮ ಆದಾಯ ಬರುವ ನಿರೀಕ್ಷೆಯಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com