ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆಗೆ ನಿರಾಕರಿಸಿದ ಕೇಂದ್ರ ಸರ್ಕಾರ

ಜಮ್ಮು-ಕಾಶ್ಮೀರದ ಅಭಿವೃದ್ಧಿ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿರುವ ಕೇಂದ್ರ ಸರ್ಕಾರ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಗಳನ್ನು ಸಾರಾಸಗಟಾಗಿ ತಿರಸ್ಕರಿಸಿದೆ.
ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ
ಶ್ರೀನಗರ: ಜಮ್ಮು-ಕಾಶ್ಮೀರದ ಅಭಿವೃದ್ಧಿ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿರುವ ಕೇಂದ್ರ ಸರ್ಕಾರ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಗಳನ್ನು ಸಾರಾಸಗಟಾಗಿ ತಿರಸ್ಕರಿಸಿದೆ. 
"ನಮ್ಮ ಆದ್ಯತೆ ಏನಿದ್ದರೂ ಅದು ರಾಜ್ಯದ ಅಭಿವೃದ್ಧಿಗೆ, ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವುದಲ್ಲ" ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವುದರ ಬಗೆಗಿನ ವರದಿಯನ್ನೂ ತಿರಸ್ಕರಿಸಿರುವ ಅರುಣ್ ಜೇಟ್ಲಿ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. 
ಜಮ್ಮು-ಕಾಶ್ಮೀರದ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಪ್ರತಿಕ್ರಿಯೆ ನೀಡಿರುವ ಅರುಣ್ ಜೇಟ್ಲಿ, ಕೆಲವು ಮಾಧ್ಯಮಗಳು ನೀಡುತ್ತಿರುವ ವರದಿಯಷ್ಟು ಪರಿಸ್ಥಿತಿ ಕೆಟ್ಟದಾಗಿಲ್ಲ ಎಂದಿದ್ದು ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿ ಸುಧಾರಣೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com