ಆಧಾರ್ ಗೆ ಜೂನ್ 30 ಡೆಡ್ ಲೈನ್, ವಿಸ್ತರಣೆ ಇಲ್ಲ: ಸುಪ್ರೀಂಗೆ ಕೇಂದ್ರ ಸ್ಪಷ್ಟನೆ

ಸರ್ಕಾರದ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಆಧಾರ್ ಕಡ್ಡಾಯವಾಗಿದ್ದು, ಇದಕ್ಕೆ ಜೂನ್ 30 ಕಡೆಯ ದಿನ.....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಸರ್ಕಾರದ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಆಧಾರ್ ಕಡ್ಡಾಯವಾಗಿದ್ದು, ಇದಕ್ಕೆ ಜೂನ್ 30 ಕಡೆಯ ದಿನ ಮತ್ತು ಇದನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ.
ಕಲ್ಯಾಣ ಯೋಜನೆಗಳ ದುರ್ಬಳಕೆಯನ್ನು ತಡೆಯುವುದಕ್ಕಾಗಿ ಆಧಾರ್ ಕಡ್ಡಾಯಗೊಳಿಸಲಾಗಿದೆ ಎಂದು ಅಟರ್ನಿ ಜನರಲ್ ಮುಕುಲ್ ರೋಹಟ್ಗಿ ಅವರು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.
ಆಧಾರ್ ಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ವಿವಿಧ ಅಧಿಸೂಚನೆಗಳನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಎಂ ಖನಿವಿಲ್ಕರ್ ಹಾಗೂ ನವೀನ್ ಸಿನ್ಹಾ ಅವರು, ಪ್ರಕರಣವನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಿದ್ದಾರೆ.
ಕೇಂದ್ರ ಸರ್ಕಾರ ತನ್ನ ಜನಪ್ರಿಯ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಬಳಕೆ ಕಡ್ಡಾಯಗೊಳಿಸಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com