ಗುರುವಾಯೂರು ದೇವಸ್ಥಾನಕ್ಕೆ ಬೆದರಿಕೆ ಕರೆ, ಭದ್ರತೆ ಹೆಚ್ಚಳ

ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಶನಿವಾರ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ದೇವಸ್ಥಾನದ...
ಗುರುವಾಯೂರು ದೇವಸ್ಥಾನ
ಗುರುವಾಯೂರು ದೇವಸ್ಥಾನ
ಗುರುವಾಯೂರು: ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಶನಿವಾರ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಅಪರಿಚಿತ ವ್ಯಕ್ತಿಯೊಬ್ಬರಿಂದ ದೇವಸ್ಥಾನದ ಸಿಬ್ಬಂದಿ ಕರೆ ಸ್ವೀಕರಿಸಿದ್ದು, ದೇವಸ್ಥಾನವನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ.
ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ ವ್ಯಕ್ತಿ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ದೇವಸ್ಥಾನದ ಸಿಬ್ಬಂದಿ ಪೊಲೀಸರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com