ಐಸಿಜೆ ತೀರ್ಪು ಮೋದಿ ಸರ್ಕಾರದ ಅತಿ ದೊಡ್ಡ ಸಾಧನೆ: ಅಮಿತ್ ಶಾ

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ತಡೆ ನೀಡಿರುವ ಅಂತರಾಷ್ಟ್ರೀಯ ಕೋರ್ಟ್(ಐಸಿಜೆ) ತೀರ್ಪು ಪ್ರಧಾನಿ ನರೇಂದ್ರ ಮೋದಿ....
ಅಮಿತ್ ಶಾ
ಅಮಿತ್ ಶಾ
ಚಂಡೀಗಢ: ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ತಡೆ ನೀಡಿರುವ ಅಂತರಾಷ್ಟ್ರೀಯ ಕೋರ್ಟ್(ಐಸಿಜೆ) ತೀರ್ಪು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅತಿ ದೊಡ್ಡ ಸಾಧನೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.
ಅಂತರಾಷ್ಟ್ರೀಯ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಅಮಿತ್ ಶಾ, ಇದು ನಮ್ಮ ಸರ್ಕಾರದ ಅತಿ ದೊಡ್ಡ ಸಾಧನೆ ಎಂದು ಬಣ್ಣಿಸಿದ್ದಾರೆ. ಅಲ್ಲದೆ ಕಾಶ್ಮೀರ ಸಮಸ್ಯೆಗೆ ಕಾಂಗ್ರೆಸ್ ನೇತೃತ್ವದ ಈ ಹಿಂದಿನ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.
ಕಾಶ್ಮೀರ ಪರಿಸ್ಥಿತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಅಧ್ಯಕ್ಷರು, ಕಾಂಗ್ರೆಸ್ ಬೇರೆ ಏನು ಹೇಳಲು ಸಾಧ್ಯ. ಕಾಶ್ಮೀರ ಸಮಸ್ಯೆಗೆ ಕಾಂಗ್ರೆಸ್ಸೆ ಕಾರಣ ಎಂದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಪರಿಸ್ಥಿತಿಯನ್ನು ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಶೀಘ್ರದಲ್ಲೇ ನಿಯಂತ್ರಿಸಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com