ಮಥುರಾ ಜೋಡಿ ಕೊಲೆ ಪ್ರಕರಣ: ಆರು ಮಂದಿ ಬಂಧನ

ಐದು ದಿನಗಳ ಹಿಂದೆ ನಡೆದ ಇಬ್ಬರು ಚಿನ್ನದ ವ್ಯಾಪಾರಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಉತ್ತರ ಪ್ರದೇಶ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಥುರಾ: ಐದು ದಿನಗಳ ಹಿಂದೆ ನಡೆದ ಇಬ್ಬರು ಚಿನ್ನದ ವ್ಯಾಪಾರಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಉತ್ತರ ಪ್ರದೇಶ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇಂದು ತಮ್ಮನ್ನು ಬಂಧಿಸಲು ಬಂದ ಪೊಲೀಸರ ಮೇಲೆಯೇ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಆರೋಪಿಗಳಾದ ಅದಿತ್ಯ, ರಂಗ, ನೀರಜ್, ಚೀನಿ, ಆಯುಶ್ ಹಾಗೂ ಚೋಟು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೌಬರಿಯಾ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಜೋಡಿ ಕೊಲೆಯ ನಂತರ ಆರೋಪಿಗಳು ದರೋಡೆ ಮಾಡಿದ್ದ ಚಿನ್ನವನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com