ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಹೆಸರನ್ನು ಇನ್ನಷ್ಟೇ ನಿರ್ಧರಿಸಬೇಕಿದೆ ಎಂದು ಹೇಳಿದ್ದಾರೆ...
ಅಮಿತ್ ಶಾ
ಅಮಿತ್ ಶಾ
Updated on
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಹೆಸರನ್ನು ಇನ್ನಷ್ಟೇ ನಿರ್ಧರಿಸಬೇಕಿದೆ ಎಂದು ಹೇಳಿದ್ದಾರೆ. 
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರವಧಿ ಮುಕ್ತಾಯಗೊಳ್ಳಲಿದ್ದು ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಪ್ರತಿಪಕ್ಷ ಜಂಟಿ ಅಭ್ಯರ್ಥಿಯನ್ನು ಕಣಕ್ಕಳಿಸುವ ಪ್ರಯತ್ನ ನಡೆಸುತ್ತಿದೆ. ಇನ್ನು ಬಿಜೆಪಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಅವರು ಅಭ್ಯರ್ಥಿಯ ಹೆಸರನ್ನು ಇನ್ನಷ್ಟೇ ಘೋಷಿಸಬೇಕಿದೆ ಎಂದರು. 
ಇದೇ ವೇಳೆ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂಬ ಮಿತ್ರಪಕ್ಷ ಶಿವಸೇನೆ ಪ್ರಸ್ತಾವನೆಯನ್ನು ಅಮಿತ್ ಶಾ ತಿರಸ್ಕರಿಸಿದ್ದಾರೆ. 
ಇನ್ನು ತನ್ನ ತಲೆಯಲ್ಲಿ ಒಬ್ಬ ಅಭ್ಯರ್ಥಿಯ ಹೆಸರಿದ್ದರೂ ಮೊದಲು ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com