ಜಮ್ಮು ಮತ್ತು ಕಾಶ್ಮೀರ: ಗುಂಡಿನ ಚಕಮಕಿ, 4 ಯೋಧರು ಹುತಾತ್ಮ, 4 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯ ನೌಗಾಮ್‌ ಸೆಕ್ಟರ್ ನಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯ ನೌಗಾಮ್‌ ಸೆಕ್ಟರ್ ನಲ್ಲಿ ಉಗ್ರರ ನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫ‌ಲಗೊಳಿಸಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಇನ್ನು ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನೂ ಸೇನಾಪಡೆ ಹೊಡೆದುರುಳಿಸಿದೆ.
ಎಲ್ ಒಸಿಯ ನೌಗಾಮ್ ಸೆಕ್ಟರ್ ನಲ್ಲಿ ನಿಯೋಜನೆಗೊಂಡಿದ್ದ ಸೈನಿಕರು ಒಳನುಸುಳಲು ಯತ್ನಿಸಿದ್ದ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಸಹ ಪ್ರತಿ ದಾಳಿ ನಡೆಸಿದ್ದು, ಗುಂಡಿನ ಕಾಳಗದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಜಮ್ಮು ಮತ್ತು ಕಾಶ್ಮೀರದ ಪೂಂಛ ಜಿಲ್ಲೆಯ ಎಲ್‌ಒಸಿ ಸಮೀಪ ನೆಲಬಾಂಬ್‌ವೊಂದು ಸ್ಫೋಟಗೊಂಡ ಪರಿಣಾಮ, ಯೋಧರೊಬ್ಬರು ಗಾಯಗೊಂಡಿದ್ದಾರೆ. ಮೆಂಧಾರ್‌ ವಲಯದಲ್ಲಿ ಅಕಸ್ಮಾತಾಗಿ ಯೋಧ ನೆಲಬಾಂಬ್‌ ಮೇಲೆಯೇ ಕಾಲಿಟ್ಟ ಪರಿಣಾಮ ಸ್ಫೋಟ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ ಎಂದು ಸೇನೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com