ಐಪಿಎಲ್ ಬೆಟ್ಟಿಂಗ್ ದಂಧೆ ಬೇಧಿಸಿದಿ ದೆಹಲಿ ಪೊಲೀಸರು, 9 ಮಂದಿ ಬಂಧನ

ದೆಹಲಿಯ ಫೈವ್ ಸ್ಟಾರ್ ಹೋಟೆಲ್ ನಲ್ಲಿ ನಡೆಯುತ್ತಿದ್ದ ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ಪೊಲೀಸರು ಸೋಮವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ದೆಹಲಿಯ ಫೈವ್ ಸ್ಟಾರ್ ಹೋಟೆಲ್ ನಲ್ಲಿ ನಡೆಯುತ್ತಿದ್ದ ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ಪೊಲೀಸರು ಸೋಮವಾರ ಬೇಧಿಸಿದ್ದು, ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿಯನ್ನು ಆಧರಿಸಿ ಇಂದು ದೆಹಲಿಯ ಹೊರವಲಯದಲ್ಲಿರುವ ಫೈವ್ ಸ್ಟಾರ್ ಹೋಟೆಲ್ ಮೇಲೆ ದಾಳಿ ನಡೆಸಿದ ಪೊಲೀಸರು, ರೈಸಿಂಗ್ ಪುಣೆ ಸೂಪರ್ ಜೆಂಟ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಅಂತಿಮ ಪಂದ್ಯದ ಮೇಲೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೈವ್ ಸ್ಟಾರ್ ಹೋಟೆಲ್ ನಲ್ಲಿ ಐಪಿಎಲ್ ಲೈವ್ ಪಂದ್ಯದ ಮೇಲೆ ಡಿಜಿಟಲ್ ಗ್ಯಾಂಬ್ಲಿಂಗ್ ನಡೆಸುತ್ತಿದ್ದ ನಾಲ್ವರು ಬುಕ್ಕಿಗಳು ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರಿಂದ ಹಣ, 10 ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಶನಿವಾರವಷ್ಟೆ ಈಶಾನ್ಯ ದೆಹಲಿಯ ಅಶೋಕ್ ವಿಹಾರನ ರೆಸ್ಟೊರೆಂಟ್ ವೊಂದರ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಮೇಲೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಏಳು ಮಂದಿಯನ್ನು ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com