'ಮನ್ ಕಿ ಬಾತ್' ನಂತರ ಇದೀಗ 'ಜನ್ ಕಿ ಬಾತ್'

ತಮ್ಮ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ನಾಗರಿಕರೊಂದಿಗೆ ಮನದಾಳದ...
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
ನವದೆಹಲಿ: ತಮ್ಮ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ನಾಗರಿಕರೊಂದಿಗೆ ಮನದಾಳದ ಮಾತುಗಳನ್ನು ಹಂಚಿಕೊಳ್ಳುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಇದೀಗ ತಮ್ಮ ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಜನರ ಅಭಿಪ್ರಾಯವನ್ನು ಪಡೆಯಲು ಜನ್ ಕಿ ಬಾತ್ ಆರಂಭಿಸಲಿದ್ದಾರೆ.
 ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಇದೇ 26ಕ್ಕೆ ಮೂರು ವರ್ಷಗಳ ಆಡಳಿತಾವಧಿ ಪೂರೈಸುವ ಹಿನ್ನೆಲೆಯಲ್ಲಿ ಅಂದಿನಿಂದ 20 ದಿನಗಳವರೆಗೆ ಜನ್ ಕಿ ಬಾತ್ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ.
ಬಿಜೆಪಿ ಮುಖ್ಯಮಂತ್ರಿಗಳು ಮತ್ತು ಹಲವು ರಾಜ್ಯಗಳಲ್ಲಿನ ಕೇಂದ್ರ ಸಚಿವರುಗಳು ತಮ್ಮ ರಾಜಕೀಯ ಸ್ಪರ್ಧಿಗಳು ಆಳ್ವಿಕೆ ನಡೆಸುವ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಹಾರಕ್ಕೆ, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕರ್ನಾಟಕ ಮತ್ತು ಒಡಿಶಾಕ್ಕೆ ಭೇಟಿ ನೀಡಲಿದ್ದಾರೆ.
ಮೋದಿ ಸೇರಿದಂತೆ 450ಕ್ಕೂ ಹೆಚ್ಚು ಬಿಜೆಪಿ ನಾಯಕರು, ಸಂಪುಟ ಸಚಿವರು, ಪಕ್ಷದ ಮುಖ್ಯಸ್ಥ ಅಮಿತ್ ಶಾ ಹಾಗೂ ಇತರ ಪದಾಧಿಕಾರಿಗಳು ತಮ್ಮ ಸ್ವಕ್ಷೇತ್ರ ಬಿಟ್ಟು ಬೇರೆ ಬೇರೆ ಕಡೆಗಳಲ್ಲಿ 900ರಷ್ಟು ಕಾರ್ಯಕ್ರಮಗಳನ್ನು ಮೇ 26ರಿಂದ ಜೂನ್ 15ರವರೆಗೆ ನಡೆಸಲಿದ್ದಾರೆ. ಇದಕ್ಕೆ ಪ್ರಧಾನಿಯವರು ಗುವಾಹಟಿಯಲ್ಲಿ ಇದೇ 26ಕ್ಕೆ ಚಾಲನೆ ನೀಡಲಿದ್ದಾರೆ.
ಬಿಜೆಪಿಯ ಬಹುತೇಕ ಮುಖ್ಯಮಂತ್ರಿಗಳು ಬಿಜೆಪಿಯೇತರ ಸರ್ಕಾರ ಆಡಳಿತ ನಡೆಸುವ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.ವೆಂಕಯ್ಯ ನಾಯ್ಡು ಮತ್ತು ನಿತಿನ್ ಗಡ್ಕರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com