ಪಾಕ್ ನ ಸೇನಾ ನೆಲೆಗಳನ್ನು ಧ್ವಂಸಗೊಳಿಸಿರುವ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ರಕ್ಷಣಾ ಸಚಿವ ಅರುಣ್ ಜೇಟ್ಲಿ, ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಭಾರತೀಯ ಸೇನೆ ನಡೆಸುವ ಕಾರ್ಯಾಚರಣೆಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಭಾರತೀಯ ಸೇನೆ ಕಣಿವೆಯಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ.