ಪಿಒಎಸ್ ಸಾಧನಗಳನ್ನು ಅಳವಡಿಸಿಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಏ.13 ರಂದು ಆದೇಶ ಹೊರಡಿಸಿತ್ತು. ಆದರೆ ಸರಿಯಾದ ವಿದ್ಯುತ್ ಪೂರೈಕೆ ಇಲ್ಲದೆ ಇದ್ದ ಕಾರಣ ಪಿಒಎಸ್ ಗಳನ್ನು ಬಳಕೆ ಮಾಡಲಾಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ಚಿಕ್ಕಮಗಳೂರಿನ ಲಕ್ಷ್ಮಿ ಹಾಗೂ 35 ಜನರು ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾ.ವಿ ವೀರಪ್ಪ, ಇಲಾಖೆಯ ಆದೇಶಕ್ಕೆ ತಡೆ ನೀಡಿದ್ದು, ಅನಿರ್ಬಂಧಿತ ವಿದ್ಯುತ್ ಪೂರೈಕೆ ಹಾಗೂ ಇಂಟರ್ ನೆಟ್ ಸಂಪರ್ಕ ನೀಡಲು ಎಷ್ಟು ಸಮಯ ಬೇಕು ಎಂದು ಪ್ರಶ್ನಿಸಿದ್ದಾರೆ.