ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಕೂದಲೆಳೆ ಅಂತರದಲ್ಲಿ ಮಹಾರಾಷ್ಟ್ರ ಸಿಎಂ ಪಾರು!

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಾತೂರ್ ಬಳಿ ಕ್ರಾಶ್ ಲ್ಯಾಂಡಿಂಗ್ ಆಗಿದ್ದು, ಅದೃಷ್ಟವಶಾತ್ ಅದರೊಳಗಿದ್ದ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಕ್ರಾಶ್ ಲ್ಯಾಂಡ್ ಆದ ಹೆಲಿಕಾಪ್ಟರ್
ಕ್ರಾಶ್ ಲ್ಯಾಂಡ್ ಆದ ಹೆಲಿಕಾಪ್ಟರ್
Updated on: 

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಾತೂರ್ ಬಳಿ ಕ್ರಾಶ್ ಲ್ಯಾಂಡಿಂಗ್ ಆಗಿದ್ದು, ಅದೃಷ್ಟವಶಾತ್ ಅದರೊಳಗಿದ್ದ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.

ಮೂಲಗಳ ಪ್ರಕಾರ ಅಮೆರಿಕ ನಿರ್ಮಿತ ಸಿಕೋರ್ ಸ್ಕೈ ಹೆಲಿಕಾಪ್ಟರ್ ನಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹಾಗೂ ಇತರೆ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಕಾರ್ಯಕ್ರಮದ ನಿಮಿತ್ತ ಲಾತೋರ್ ಮಾರ್ಗವಾಗಿ ಗಡ್  ಚಿರೋಲಿಗೆ ಹೆಲಿಕಾಪ್ಟರ್ ತೆರಳುತ್ತಿತ್ತು. ಕಾಪ್ಟರ್ ಟೇಕ್ ಆಫ್ ಆಗುತ್ತಿದ್ದಂತೆಯೇ ಅದರಲ್ಲಿನ ಗಾಳಿಯಂತ್ರದಲ್ಲಿ ದೋಷ ಕಂಡುಬಂದ ಹಿನ್ನಲೆಯಲ್ಲಿ ಕೂಡಲೇ ಪೈಲಟ್ ಕಾಪ್ಟರ್ ಅನ್ನು ಲ್ಯಾಂಡ್ ಮಾಡಲು ಮುಂದಾಗಿದ್ದಾನೆ. ಈ ವೇಳೆ  ವಿಮಾನ ಪೈಲಟ್ ನಿಯಂತ್ರಣ ತಪ್ಪಿದ್ದು, ಕ್ರಾಶ್ ಲ್ಯಾಂಡ್ ಆಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ಹಾಗೂ ಅವರ ತಂಡಕ್ಕೆ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಫಡ್ನವಿಸ್ ಅವರು, ಅದೃಷ್ಟವಶಾತ್ ನಾನು ಮತ್ತು ನನ್ನ  ತಂಡ ಪ್ರಾಣಾಪಾಯದಿಂದ ಪಾರಾಗಿದ್ದೇವೆ. ಯಾರೂ ಹೆದರಬೇಕಿಲ್ಲ. ಘಟನೆಯಲ್ಲಿ ಓರ್ವ ಅಧಿಕಾರಿಗೆ ಸಣ್ಣ ಪ್ರಮಾಣದ ಪೆಟ್ಟಾಗಿದ್ದು ಬಿಟ್ಟರೇ ಬೇರೆ ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ಫಡ್ನವಿಸ್ ಟ್ವೀಟ್ ಮಾಡಿದ್ದಾರೆ.

ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿ ನೀಡಿರುವ ನಾಗರಿಕ ವಿಮಾನಯಾನ ಸಚಿವಾಲಯ, ಹೆಲಿಕಾಪ್ಟರ್ ನಲ್ಲಿನ ವಿಂಡ್ ಶೀಟ್ ನಲ್ಲಿನ ತಾಂತ್ರಿಕ ದೋಷವೇ ಘಟನೆಗೆ ಕಾರಣವಾಗಿದೆ. ಅಪಾಯದ ಮುನ್ಸೂಚನೆ  ಅರಿಯುತ್ತಿದ್ದಂತೆಯೇ ಪೈಲಟ್ ಕಾಪ್ಟರ್ ಲ್ಯಾಂಡ್ ಮಾಡಿದ್ದಾನೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com