ಕಾಶ್ಮೀರ ಕಣಿವೆಗೆ ಉರುಳಿದ ಶಾಲಾ ಬಸ್, ಹಲವು ವಿದ್ಯಾರ್ಥಿಗಳು ಸಾವಿನ ಶಂಕೆ

40 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್ ವೊಂದು ಗುರುವಾರ ಕಣಿವೆಗೆ ಉರುಳಿ ಬಿದ್ದ ಪರಿಣಾಮ ಹಲವು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ 40 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್ ವೊಂದು ಗುರುವಾರ ಕಣಿವೆಗೆ ಉರುಳಿ ಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಪೂಂಚ್-ಮುಘಲ್ ರಸ್ತೆಯಲ್ಲಿ ಮಂಜಕೋಟ್ ನಿಂದ ಪಿರ್ ಕಿ ಗಲಿ ಗೆ ಪಿಕ್ ನಿಕ್ ಗೆ ತೆರಳುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. 
ರಜೌರಿ ಜಿಲ್ಲೆಯ ಮಂಜಾಕೋಟ್ ನ ಗರೀಬ್ ನವಾಜ್ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ 40 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ 12ಕ್ಕೂ ಅಧಿಕ ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com