ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ 40 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್ ವೊಂದು ಕಣಿವೆಗೆ ಉರುಳಿ ಬಿದ್ದಿದೆ ಎನ್ನಲಾಗಿತ್ತು. ಆದರೆ ಇದೀಗ ಬಂದ ಮಾಹಿತಿ ಪ್ರಕಾರ ಬಸ್ ಕಣಿವೆಗೆ ಉರುಳಿ ಬಿದ್ದಲ್ಲಿ ಎಲ್ಲಾ 40 ವಿದ್ಯಾರ್ಥಿಗಳು ಸುರಕ್ಷಿತವಾಗಿ ಪೂಂಚ್ ತಲುಪಿದ್ದಾರೆ ಎಂದು ಗುರುವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೂಂಚ್-ಮುಘಲ್ ರಸ್ತೆಯಲ್ಲಿ ಮಂಜಕೋಟ್ ನಿಂದ ಪಿರ್ ಕಿ ಗಲಿ ಗೆ ಪಿಕ್ ನಿಕ್ ಗೆ ತೆರಳಿದ್ದ ಶಾಲಾ ಬಸ್ ಸುರಕ್ಷಿತವಾಗಿ ವಾಪಸ್ ಬಂದಿದ್ದು, ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಪೂಂಚ್ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಸರೂರ್ ಮಿರ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇದಕ್ಕು ಮುನ್ನ ರಜೌರಿ ಜಿಲ್ಲೆಯ ಮಂಜಾಕೋಟ್ ನ ಗರೀಬ್ ನವಾಜ್ ಶಾಲೆಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಕಣಿವೆಗೆ ಉರುಳಿ ಬಿದ್ದಿದ್ದು, ಬಸ್ ನಲ್ಲಿದ್ದ 40 ವಿದ್ಯಾರ್ಥಿಗಳು ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು.