ಆ್ಯಂಬುಲೆನ್ಸ್'ಗಾಗಿ ಬೆಂಗಾವಲು ವಾಹನ ನಿಲ್ಲಿಸಿ ದಾರಿ ಬಿಟ್ಟ ಪ್ರಧಾನಿ ಮೋದಿ

ತಾವು ಸಾಗುತ್ತಿದ್ದ ದಾರಿಯಲ್ಲಿ ಬಂದ ಆ್ಯಂಬುಲೆನ್ಸ್'ಗೆ ದಾರಿ ಮಾಡಿಕೊಡುವ ಸಲುವಾಗಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ತಮ್ಮ ಬೆಂಗಾವಲು ವಾಹನಗಳನ್ನು ನಿಲ್ಲಿಸಿ ಮಾನವೀಯತೆಯನ್ನು ಮರೆದಿದ್ದಾರೆ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
ಗಾಂಧಿನಗರ: ತಾವು ಸಾಗುತ್ತಿದ್ದ ದಾರಿಯಲ್ಲಿ ಬಂದ ಆ್ಯಂಬುಲೆನ್ಸ್'ಗೆ ದಾರಿ ಮಾಡಿಕೊಡುವ ಸಲುವಾಗಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ತಮ್ಮ ಬೆಂಗಾವಲು ವಾಹನಗಳನ್ನು ನಿಲ್ಲಿಸಿ ಮಾನವೀಯತೆಯನ್ನು ಮರೆದಿದ್ದಾರೆ. 
ಆಫ್ರಿಕನ್ ಡೆವಲಪ್'ಮೆಂಟ್ ಬ್ಯಾಂಕ್'ನ 52ನೇ ವಾರ್ಷಿಕ ಸಭೆಯ ಉದ್ಘಾಟನೆಗೆಂದು ಆಗಮಿಸಿದ್ದ ಪ್ರಧಾನಿ ಮೋದಿಯವರು ಗಾಂಧಿನಗರದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. 
ಗಾಂಧಿನಗರ-ಅಹಮದಾಬಾದ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ, ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಮೀಪಿಸುತ್ತಿದ್ದ ವೇಳೆ ಆ್ಯಂಬುನೆಲ್ಸ್ ಬರುವುದನ್ನು ಪ್ರಧಾನಿ ಮೋದಿಯರು ಗಮನಿಸಿದ್ದಾರೆ. ಕೂಡಲೇ ಭದ್ರತಾ ನಿಯಮಗಳನ್ನು ಮುರಿದು, ತಮ್ಮ ಬೆಂಗಾವಲು ವಾಹನಗಳನ್ನು ಬದಿಗೆ ಸರಿದು ನಿಲ್ಲುವಂತೆ ಮೋದಿ ಸೂಚಿಸಿದ್ದಾರೆ. ಆ್ಯಂಬುಲೆನ್ಸ್ ಸಾಗಲು ಅವಕಾಶ ಮಾಡಿಕೊಟ್ಟಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಯವರು ಇತರರಿಗೆ ಮಾದರಿಯಾಗಿದ್ದಾರೆ. 
ಕಳೆದ ತಿಂಗಳಷ್ಟೇ ವಿಐಪಿ ವಾಹನಗಳ ಮೇಲಿನ ಕೆಂಪು ದೀಪಗಳನ್ನು ತೆಗೆಯುವ ನಿರ್ಧಾರ ಕೈಗೊಂಡಿದ್ದ ಪ್ರಧಾನಿ ಮೋದಿಯವರು, ಪ್ರತೀಯೊಬ್ಬ ಭಾರತೀಯನೂ ವಿಐಪಿ ಎಂದು ಪ್ರತಿಪಾದಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com