ಚುನಾವಣೆಯಲ್ಲಿ ಇವಿಎಂಗಳನ್ನು ತಿರುಚಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ, ಬಿಎಸ್ಪಿ, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿದ್ದವು. ಹೀಗಾಗಿ ಜೂನ್ 3ರಿಂದ ಚುನಾವಣಾ ಆಯೋಗಕ್ಕೆ ಬಂದು ನಿಮ್ಮ ಆರೋಪವನ್ನು ಸಾಬೀತುಪಡಿಸಬಹುದು ಮತ್ತು ಆರೋಪಕ್ಕೆ ಪೂರಕವಾದ ಪುರಾವೆಯನ್ನೂ ಪಕ್ಷಗಳು ಆಯೋಗಕ್ಕೆ ಸಲ್ಲಿಸಬಹುದು ಎಂದು ಹೇಳಿತ್ತು.