ಬಾಬ್ರಿ ಮಸೀದಿ ಧ್ವಂಸ ಕೇಸು: ಸಿಬಿಐ ವಿಶೇಷ ನ್ಯಾಯಾಲಯ ಮುಂದೆ ಹಾಜರಾಗಲು ಅಡ್ವಾಣಿ, ಜೋಶಿ, ಉಮಾ ಭಾರತಿ ವಿಫಲ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳಾದ ಮಾಜಿ ಉಪ ಪ್ರಧಾನಿ...
ಧ್ವಂಸಕ್ಕೆ ಮುನ್ನದ ಬಾಬ್ರಿ ಮಸೀದಿ
ಧ್ವಂಸಕ್ಕೆ ಮುನ್ನದ ಬಾಬ್ರಿ ಮಸೀದಿ
ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳಾದ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ, ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ ಜೋಶಿ ಮತ್ತು ಕೇಂದ್ರ ಸಚಿವೆ ಉಮಾ ಭಾರತಿ ನಿನ್ನೆ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವಲ್ಲಿ ವಿಫಲರಾದರು.
ವೈಯಕ್ತಿಕ ಕಾರಣಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಈ ಮೂವರು ನಾಯಕರು ತಿಳಿಸಿದ್ದಾರೆ. ಸಂಸದ ವಿಜಯ್ ಕುಮಾರ್, ಸಾದ್ವಿ ರಿತಂಬರ ಮತ್ತು ವಿಷ್ಣು ಹರಿ ದಾಲ್ಮಿಯಾ ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.
ಮೇ 30ರೊಳಗೆ ಕಡ್ಡಾಯವಾಗಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಬೇಕು.
ನಂತರ ಯಾವುದೇ ಕಾರಣಕ್ಕೂ ವಿನಾಯ್ತಿ ನೀಡುವುದಾಗಲಿ ವಿಚಾರಣೆ ಮುಂದೂಡುವುದಾಗಲಿ ಮಾಡಲು ಸಾಧ್ಯವಿಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಧೀಶ ಎಸ್.ಕೆ.ಯಾದವ್ ಎಚ್ಚರಿಕೆ ನೀಡಿದ್ದಾರೆ.
ಕಳೆದ ತಿಂಗಳು ಸುಪ್ರೀಂ ಕೋರ್ಟ್ ನೀಡಿದ ಆದೇಶಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ವಿರುದ್ಧ ಆರೋಪ ಸಾಬೀತುಪಡಿಸಲು ನಿನ್ನೆ ದಿನಾಂಕವನ್ನು ನಿಗದಿಪಡಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com