ಹೊಸ ಕಾನೂನು ಹಸುಗಳನ್ನು ರಕ್ಷಿಸುತ್ತದೆ: ಮನೇಕಾ ಗಾಂಧಿ ಭರವಸೆ

ದೇಶಾದ್ಯಂತ ಗೋಹತ್ಯೆ ನಿಷೇಧಿಸಿರುವ ಕೇಂದ್ರ ಸರ್ಕಾರ, ದನ ಕರುಗಳನ್ನು ಮಾರಾಟ ಮಾಡಲು ಮತ್ತು ಖರೀದಿಸಿಲು ರೈತರಿಗೆ ಮಾತ್ರ ಅವಕಾಶ ಕಲ್ಪಿಸಿ ಜಾರಿಗೆ ..
ಮನೇಕಾ ಗಾಂಧಿ
ಮನೇಕಾ ಗಾಂಧಿ
ನವದೆಹಲಿ: ದೇಶಾದ್ಯಂತ ಗೋಹತ್ಯೆ ನಿಷೇಧಿಸಿರುವ ಕೇಂದ್ರ ಸರ್ಕಾರ, ದನ ಕರುಗಳನ್ನು ಮಾರಾಟ ಮಾಡಲು ಮತ್ತು ಖರೀದಿಸಿಲು ರೈತರಿಗೆ ಮಾತ್ರ ಅವಕಾಶ ಕಲ್ಪಿಸಿ ಜಾರಿಗೆ ತಂದಿರುವ ಹೊಸ ಕಾನೂನು ಹಸುಗಳನ್ನು ಕೆಟ್ಟದಾಗಿ ನೋಡಿಕೊಳ್ಳುವುದಿಲ್ಲ ಎಂದು ಸಚಿವೆ ಮನೇಕಾ ಗಾಂಧಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಪ್ರಾಣಿ ಹಕ್ಕುಗಳ ಕಾರ್ಯಕರ್ತೆಯಾಗಿರುವ ಮನೇಕಾ ಗಾಂಧಿ ಈ ಹಿಂದೆ ದೇಶದಲ್ಲಿರುವ ಎಲ್ಲಾ ಮೃಗಾಲಯಗಳನ್ನು ಮುಚ್ಚಬೇಕು ಹಾಗೂ ಗೋಹತ್ಯೆ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದರು.
8 ರಿಂದ 9 ಹಸುಗಳನ್ನು ಸಾಗಿಸುವ ವಾಹನದಲ್ಲಿ 80 ಹಸುಗಳನ್ನು ತುಂಬಿ  ಮಾರುಕಟ್ಟೆಗೆ ಸಾಗಿಸಿ ಕಸಾಯಿಖಾನೆಗಳಿಗೆ ಮಾರಾಟ ಮಾಡುತ್ತಾರೆ, ಜೊತೆಗೆ ರೈತರು ಅನಾರೋಗ್ಯ ಪೀಡಿತ ಹಸುಗಳನ್ನು ಈ ಮಾರುಕಟ್ಟೆಯಲ್ಲಿ  ತಂದು ಮಾರಾಟ ಮಾಡುತ್ತಾರೆ. ಆದರೆ ಹೊಸ ನಿಯಮ ಇಂಥ ಕ್ರೂರ ಆಚರಣೆಯನ್ನು ತಡೆಗಟ್ಟುತ್ತದೆ ಎಂದು ಅವರು ಭರವಸೆ ವ್ಯಕ್ತ ಪಡಿಸಿದ್ದಾರೆ.
ಪ್ರಾಣಿಗಳ ವ್ಯಾಪಾರಕ್ಕೆ ಹೊರಡಿಸಿರುವ ಹೊಸ ಆದೇಶದನ್ವಯ ಗೋವುಗಳನ್ನು ಭೂಮಾಲೀಕರಿಗೆ ಮಾತ್ರ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ದಾಖಲೆಗಳ ಸಮೇತ ತಾನು ಕೃಷಿಕ ಎಂಬುದನ್ನು ಸಾಬೀತುಪಡಿಸುವ ವ್ಯಕ್ತಿಗಳಿಗೆ ಮಾತ್ರ ಜಾನುವಾರುಗಳನ್ನು ಮಾರಾಟ ಮಾಡಬಹುದಾಗಿದೆ.
ಗೋವುಗಳನ್ನು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಮಾತ್ರ ಬಳಸಿಕೊಳ್ಳಬೇಕು, ಕಸಾಯಿಖಾನೆಗೆ ಮಾರಾಟ ಮಾಡುವುದಕ್ಕಲ್ಲ ಎಂದು 1960ರ ಪ್ರಾಣಿಗಳ ಹಿಂಸಾಚಾರ ತಡೆ ಕಾಯ್ದೆಯ ವಿಶೇಷ ವಿಧಿಯಲ್ಲಿ ಸ್ಪಷ್ಟಪಡಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com