ಪ್ರವೇಶ ನಿರಾಕರಿಸಿದರೂ ಕೂಡ ಸಹರಾನ್ ಪುರಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬಾರದೆಂದು ಹೇಳಿದ್ದರೂ ಕೂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬಾರದೆಂದು ಹೇಳಿದ್ದರೂ ಕೂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಗಲಭೆ ಪೀಡಿತ ಸಹರಾನ್ ಪುರ್ ಗೆ ಭೇಟಿ ನೀಡಲಿದ್ದಾರೆ.
ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವವರೆಗೆ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡದಂತೆ ಉತ್ತರ ಪ್ರದೇಶ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕ ಆದಿತ್ಯ ಮಿಶ್ರಾ ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದರು.
ಸಹರಾನ್ ಪುರದಲ್ಲಿ ಕಾನೂನು ಸುವ್ಯವಸ್ಥೆ ಸಹಜ ಸ್ಥಿತಿಗೆ ಮರಳುವವರೆಗೆ ಯಾವುದೇ ರಾಜಕೀಯ ಪಕ್ಷಗಳ ನಾಯಕರು ಇಲ್ಲಿಗೆ ಭೇಟಿ ನೀಡದಂತೆ ನಾವು ಮನವಿ ಮಾಡಿದ್ದೇವೆ ಎಂದು ಮಿಶ್ರಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಜಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಎರಡು ಗುಂಪುಗಳ ನಡುವೆ ಸಂಘರ್ಷಣೆ ನಡೆದು ಉದ್ವಿಗ್ನ ಪರಿಸ್ಥಿತಿ ನೆಲೆಸಿರುವ ಸಹರಾನ್ ಪುರ್ ಗೆ ಇಂದು ಪರಿಸ್ಥಿತಿಯನ್ನು ಪರಾಮರ್ಶಿಸಲು ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಬಹುಜನ ಸಮಾಜವಾದಿ ಪಕ್ಷ ನಾಯಕಿ ಮಾಯಾವತಿ ಸಹರಾನ್ ಪುರಕ್ಕೆ ಭೇಟಿ ನೀಡಿದ್ದ ವೇಳೆ ಇಲ್ಲಿ ಘರ್ಷಣೆ ಉಂಟಾಯಿತು. ಘಟನೆಯಲ್ಲಿ ಓರ್ವ ಮೃತಪಟ್ಟು ಅನೇಕರು ಗಾಯಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com