ಈ ಕುರಿತಂತೆ ಮಾಹಿತಿ ನೀಡಿರುವ ರಕ್ಷಣಾ ಸಚಿವಾಲಯದ ವಕ್ತಾರ ಲೆ.ಕ.ಮನೀಷ್ ಮೆಹ್ತಾ ಅವರು, ಬೆಳಿಗ್ಗೆ 2.30ರ ಸುಮಾರಿಗೆ ಕೃಷ್ಣ ಘಾಟಿಯ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿತ್ತು. ಗಡಿ ನುಸುಳಲು ಉಗ್ರರು ಯತ್ನ ನಡೆಸುತ್ತಿದ್ದರು. ಈ ವೇಳೆ ಸೇನೆ ಉಗ್ರನೊಬ್ಬನನ್ನು ಹತ್ಯೆ ಮಾಡಿದೆ ಎಂದು ಹೇಳಿದ್ದಾರೆ.