ಜಮ್ಮು-ಕಾಶ್ಮೀರ; ಗಡಿಯಲ್ಲಿ ಮತ್ತೆ ಪಾಕ್ ಅಪ್ರಚೋದಿತ ಗುಂಡಿನ ದಾಳಿ, ಓರ್ವ ನಾಗರಿಕ ಸಾವು
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯಿರುವ ಕೆರನ್ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ನಾಗರಿಕ ಸಾವನ್ನಪ್ಪಿ ಮತ್ತೋರ್ವ ವ್ಯಕ್ತಿಗೆ ಗಾಯವಾಗಿದೆ ಎಂದು...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯಿರುವ ಕೆರನ್ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ನಾಗರಿಕ ಸಾವನ್ನಪ್ಪಿ ಮತ್ತೋರ್ವ ವ್ಯಕ್ತಿಗೆ ಗಾಯವಾಗಿದೆ ಎಂದು ಭಾನುವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆಯಿಂದಲೇ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದ್ದು, ಸ್ಥಳೀಯ ನಾಗರೀಕರನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಪರಿಣಾಮ ಓರ್ವ ನಾಗರಿಕ ಸಾವನ್ನಪ್ಪಿ, ಮತ್ತೊಬ್ಬನಿಗೆ ಗಂಭೀರವಾಗ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರ್ಷದ ಹಿಂದಷ್ಟೇ ಕಾಶ್ಮೀರ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಉಗ್ರ ಬುರ್ಹಾನ್ ವಾನಿ ಉತ್ತರಾಧಿಕಾರಿ ಸಬ್ಜಾರ್ ಭಟ್ ನನ್ನು ನಿನ್ನೆಯಷ್ಟೇ ಭಾರತೀಯ ಸೇನೆ ಹತ್ಯೆ ಮಾಡಿತ್ತು. ಇದಾದ ಬಳಿಕ ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಇದರ ಬೆನ್ನಲ್ಲೇ, ಕೃಷ್ಣಘಾಟಿ ಸೆಕ್ಟರ್ ಬಳಿ ಉಗ್ರನೊಬ್ಬ ಗಡಿ ನುಸುಳಲು ಯತ್ನ ನಡೆಸಿದ್ದಾನೆ. ಈ ವೇಳೆ ಭಾರತೀಯ ಸೇನೆ ಉಗ್ರರನ್ನು ಹೊಡೆದುರುಳಿಸಿದೆ.