ಪೊಲೀಸ್ ಮಾಹಿತಿದಾರ ಎಂಬ ಶಂಕೆ: ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ನಕ್ಸಲರು

ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆಂಬ ಶಂಕೆ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಪಹರಣ ಮಾಡಿರುವ ನಕ್ಸಲರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನ ಬೊರಾರೋ ಜಿಲ್ಲೆಯಲ್ಲಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೋಕಾರೋ: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆಂಬ ಶಂಕೆ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಪಹರಣ ಮಾಡಿರುವ ನಕ್ಸಲರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನ ಬೊರಾರೋ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 
ಹತ್ಯೆಯಾದ ವ್ಯಕ್ತಿ ಬೊಕಾರೋದಲ್ಲಿರುವ ತಿಸ್ಕೊಪಿ ಪ್ರದೇಶದ ನಿವಾಸಿಯಾಗಿದ್ದಾನೆ. ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ವ್ಯಕ್ತಿಯ ಮನೆಗೆ ನುಗ್ಗಿರುವ ನಕ್ಸಲರು ವ್ಯಕ್ತಿಯನ್ನು ಹೊತ್ತೊಯ್ದಿದ್ದಾರೆ. ನಂತರ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 
ವ್ಯಕ್ತಿಯ ಮೃತದೇಹ ತಿಸ್ಕೊಪಿ ಪ್ರದೇಶದಲ್ಲಿರುವ ಶಾಲೆಯೊಂದರ ಬಳಿ ಇಂದು ಬೆಳಿಗ್ಗೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 
ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆಂದು ಶಂಕಿಸಿ ನಕ್ಸಲರು ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆಂದು ಪ್ರಾಥಮಿಕ ತನಿಖಾ ವರದಿಯಲ್ಲಿ ತಿಳಿದುಬಂದಿದೆ. 
ಘಟನೆ ಬಳಿಕ ಸಿಆರ್ ಪಿಎಫ್, ವಿಶೇಷ ತನಿಖಾ ಪಡೆ, ಜಿಲ್ಲಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ದುಮಾರಿ, ಝುಮ್ರಾ ಮತ್ತು ತಿಸ್ಕೊಪಿ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com