ಕಾಶ್ಮೀರಕ್ಕೆ ಸಂಬಂಧಪಟ್ಟವರ ಜೊತೆ ಮಾತುಕತೆಗೆ ಕೇಂದ್ರ ಸರ್ಕಾರ ಮುಕ್ತವಾಗಿದೆ ಎಂದಿರುವ ರಾಜನಾಥ್ ಸಿಂಗ್, ಕಾಶ್ಮೀರ ಸಮಸ್ಯೆ ಕೇಂದ್ರ ಸರ್ಕಾರಕ್ಕೆ ಸವಾಲಿನ ಸಂಗತಿಯಾಗಿದೆ. ಆದರೆ ಈ ವಿಷಯದಲ್ಲಿ ಕೇಂದ್ರ ಸರ್ಕಾರ ದ್ವಿಮುಖ ನೀತಿ ಅನುಸರಿಸುವುದಿಲ್ಲ ಎಂದಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವುದಕ್ಕೆ ನಿಗದಿತ ಗಡುವು ಅಥವಾ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಅನುಸರಿಸುವ ಮಾರ್ಗಗಳ ಬಗ್ಗೆ ಮಾಹಿತಿ ನೀಡಲು ರಾಜನಾಥ್ ಸಿಂಗ್ ನಿರಾಕರಿಸಿದ್ದಾರೆ.