ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ತಡೆ

ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಹೊರಡಿಸಿದ್ದ ಆದೇಶಕ್ಕೆ ಮಂಗಳವಾರ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಹೊರಡಿಸಿದ್ದ ಆದೇಶಕ್ಕೆ ಮಂಗಳವಾರ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿದೆ.
ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿ, ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿದೆ.
ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶಿಸುವುದು ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಕಳೆದ ವಾರ ಕೇಂದ್ರ ಪರಿಸರ ಸಚಿವಾಲಯ ಹೊಸ ಅಧಿಸೂಚನೆ ಹೊರಡಿಸಿದ್ದು, ಗೋವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ.
ಪ್ರಾಣಿಗಳ ವ್ಯಾಪಾರಕ್ಕೆ ಹೊರಡಿಸಿರುವ ಹೊಸ ಆದೇಶದನ್ವಯ ಗೋವುಗಳನ್ನು ಭೂಮಾಲೀಕರಿಗೆ ಮಾತ್ರ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ದಾಖಲೆಗಳ ಸಮೇತ ತಾನು ಕೃಷಿಕ ಎಂಬುದನ್ನು ಸಾಬೀತುಪಡಿಸುವ ವ್ಯಕ್ತಿಗಳಿಗೆ ಮಾತ್ರ ಜಾನುವಾರುಗಳನ್ನು ಮಾರಾಟ ಮಾಡಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com