ವಾಡಿಕೆಗಿಂತ ಮುನ್ನವೇ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು

ನೈರುತ್ಯ ಮುಂಗಾರು ಇಂದು ಕೇರಳ ರಾಜ್ಯವನ್ನು ಪ್ರವೇಶಿಸಲಿದೆ. ಈಶಾನ್ಯ ರಾಜ್ಯಗಳಲ್ಲಿ ಕೂಡ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ನೈರುತ್ಯ ಮುಂಗಾರು ಇಂದು ಕೇರಳ ರಾಜ್ಯವನ್ನು ಪ್ರವೇಶಿಸಲಿದೆ. ಈಶಾನ್ಯ ರಾಜ್ಯಗಳಲ್ಲಿ ಕೂಡ ವಾಡಿಕೆಗಿಂತ ಎರಡು ದಿನ ಮುಂಚಿತವಾಗಿಯೇ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಿಂದ ಕೇರಳ ರಾಜ್ಯದಾದ್ಯಂತ ಮಳೆ ಸುರಿಯುತ್ತಿದೆ. ಕಳೆದ 48 ಗಂಟೆಗಳಲ್ಲಿ ಮುಂಗಾರು ಮಳೆ ಸುರಿಯುತ್ತಿದೆ ಎಂದು ಶೇಕಡಾ 78ರಷ್ಟು 78 ರಷ್ಟು ಮೇಲ್ವಿಚಾರಣಾ ಕೇಂದ್ರಗಳು ವರದಿ ಮಾಡಿವೆ.
ಕೇರಳ ಮತ್ತು ಈಶಾನ್ಯ ಭಾಗಕ್ಕೆ ಮುಂಗಾರು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾ ನಿರ್ದೇಶಕ ಕೆ.ಜೆ.ರಮೇಶ್ ತಿಳಿಸಿದ್ದಾರೆ.
ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಕೆಲ ಭಾಗಗಳು, ಕೊಮೊರಿನ್ ಪ್ರದೇಶ, ಲಕ್ಷದ್ವೀಪ ಪ್ರದೇಶ, ಕೇರಳ, ತಮಿಳುನಾಡುಗಳಿಗೆ ಕೂಡ ನೈರುತ್ಯ ಮುಂಗಾರು ಪ್ರವೇಶಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಮಾನ್ಯವಾಗಿ ಪ್ರತಿವರ್ಷ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸುವುದು ಜೂನ್ 1ರಂದು. ಅಂಡಮಾನ್ ಸಮುದ್ರ ಮೂಲಕ ನೈರುತ್ಯ ಮುಂಗಾರು ಸಾಮಾನ್ಯವಾಗಿ ಮೇ 20ರಂದು ಪ್ರವೇಶಿಸಿ ಅಲ್ಲಿಂದ ಒಂದು ವಾರಗಳಲ್ಲಿ ಕೇರಳ ಪ್ರವೇಶಿಸುತ್ತದೆ. ಈ ವರ್ಷ ಅಂಡಮಾನ್ ಗೆ 6 ದಿನ ಮುಂಚಿತವಾಗಿಯೇ ಬಂದಿದೆ.
ಈ ವರ್ಷ ಮುಂಗಾರು ಮಳೆ ಸಾಧಾರಣವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com