ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.
ಜೂನ್ 3ಕ್ಕೆ ಕರುಣಾನಿಧಿ ಅವರು 94ನೇ ವಸಂತಕ್ಕೆ ಕಾಲಿಡಲಿದ್ದಾರೆ. ಜತೆಗೆ ಶಾಸನ ಸಭೆಯ ಸದಸ್ಯರಾಗಿ 60 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚೆನ್ನೈನ ರಾಯ್ ಪೇಟೆಯ ವೈಎಂಸಿಎ ಮೈದಾನದಲ್ಲಿ ಪಕ್ಷ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ಇದಕ್ಕೂ ಮುನ್ನ ಜೂನ್ 1ರಂದು ರಾಹುಲ್ ಗಾಂಧಿ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ತೆಲಂಗಾಣ ಸ್ವತಂತ್ರ ರಾಜ್ಯವಾಗಿ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.