ಬಿಲ್ಕಿಸ್ ಬಾನು
ಬಿಲ್ಕಿಸ್ ಬಾನು

ಬಿಲ್ಕಿಸ್ ಪ್ರಕರಣ: ಐಪಿಎಸ್ ಅಧಿಕಾರಿ ಆರ್ ಎಸ್ ಭಗೋರ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ನಕಾರ

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಐಪಿಎಸ್ ಅಧಿಕಾರಿಯ ಶಿಕ್ಷೆಗೆ ತಡೆ....
ನವದೆಹಲಿ: 2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಐಪಿಎಸ್ ಅಧಿಕಾರಿಯ ಶಿಕ್ಷೆಗೆ ತಡೆ ನೀಡಲು ಮಂಗಳವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ತಮ್ಮ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಐಪಿಎಸ್ ಅಧಿಕಾರಿ ಆರ್ ಎಸ್ ಭಗೋರ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ ಕೆ ಸಿಕ್ರಿ ಹಾಗೂ ದೀಪಕ್ ಗುಪ್ತಾ ಅವರನ್ನೊಳಗೊಂಡ ರಜಾ ಪೀಠ, ತಪ್ಪಿತಸ್ಥ ಅಧಿಕಾರಿಯ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿ, ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿದೆ. 
ಈ ಬಗ್ಗೆ ಪ್ರತಿಕ್ರಿಯಿಸಿರುವ ಐಪಿಎಸ್ ಅಧಿಕಾರಿ ಪರ ವಕೀಲರು, ಭಗೋರ ಅವರ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೀಗಾಗಿ ಅವರು ಕಾನೂನು ಪ್ರಕಾರ ಸೇವೆಯಿಂದ ವಜಾಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಪ್ರಸ್ತೂತ ಗುಜರಾತ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಆರ್ ಭಗೋರ ಹಾಗೂ ಇತರೆ ನಾಲ್ವರು ಪೊಲೀಸ್ ಪೇದೆಗಳೊಂದಿಗೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. 
ಗುಜರಾತ್ ಗಲಭೆಯಲ್ಲಿ 19 ವರ್ಷದ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ನಂತರ ಆಕೆಯ ಕುಟುಂಬದ 14 ಮಂದಿಯನ್ನು ಕ್ರೂರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೋರ್ಟ್ ಐಪಿಎಸ್ ಅಧಿಕಾರಿ ಸೇರಿದಂತೆ 12 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನೀಡಿದ್ದ ತೀರ್ಪನ್ನು  ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದೆ.
2002ರ ಮಾರ್ಚ್ 3ರಂದು ಗುಜರಾತ್ ನ ದಾವೊದ್ ಜಿಲ್ಲೆಯ ದೇವ್ ಗರ್ ಬರಿಯಾ ಗ್ರಾಮದಲ್ಲಿ ಬಿಲ್ಕಿಸ್ ಬಾನು ಎಂಬ ಗರ್ಭಿಣಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಬಳಿಕ ಆಕೆಯ 3 ವರ್ಷದ ಮಗಳು ಸೇರಿದಂತೆ ಕುಟುಂಬದ 14 ಮಂದಿಯನ್ನು ಬರ್ಬರವಾಗಿ ಹತ್ಯೆಗೈದಿದ್ದರು. ಘಟನೆಯಲ್ಲಿ ಬಿಲ್ಕಿಸ್ ಹಾಗೂ ಕುಟುಂಬದ ಮಾಸ್ಟರ್ ಹುಸೈನ್ ಮತ್ತು ಸದ್ದಾಂ ಬದುಕುಳಿದಿದ್ದರು.

Related Stories

No stories found.

Advertisement

X
Kannada Prabha
www.kannadaprabha.com