ಕೇಂದ್ರದ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ನಿನ್ನೆಯಷ್ಟೇ ಮದ್ರಾಸ್ ಐಐಟಿ ಕ್ಯಾಂಪಸ್ ನಲ್ಲಿ ಬೀಫ್ ಫೆಸ್ಟ್ ಆಯೋಜಿಸಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಗೋರಕ್ಷಕರು ಐಐಟಿ ವಿದ್ಯಾರ್ಥಿ ಆರ್. ಸೂರಜ್ ಎಂಬುವವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದರು. ವಿದ್ಯಾರ್ಥಿಯ ಬಲಗಣ್ಣಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.