ಕಾಬುಲ್ ಸ್ಫೋಟ: ಪ್ರಧಾನಿ ಮೋದಿ ತೀವ್ರ ಖಂಡನೆ

ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿ ನಡೆಸಲಾದ ಪ್ರಬಲ ಬಾಂಬ್ ಸ್ಫೋಟಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರವಾಗಿ ಖಂಡಿಸಿದ್ದಾರೆ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ: ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿ ನಡೆಸಲಾದ ಪ್ರಬಲ ಬಾಂಬ್ ಸ್ಫೋಟಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರವಾಗಿ ಖಂಡಿಸಿದ್ದಾರೆ. 
ಬಾಂಬ್ ಸ್ಫೋಟ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭಯೋತ್ಪಾದನೆ ವಿರುದ್ಧದ ಯಾವುದೇ ಹೋರಾಟದಲ್ಲೂ ಭಾರತ ಎಂದಿಗೂ ಅಫ್ಘಾನಿಸ್ತಾನದ ಪರವಾಗಿರುತ್ತದೆ. ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವವರನ್ನು ಮೊದಲು ಸೋಲಿಸಬೇಕೆಂದು ಹೇಳಿದ್ದಾರೆ. 
ಕಾಬುಲ್ ಉಗ್ರ ದಾಳಿನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ದಾಳಿಯಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತೀವ್ರವಾಗಿ ಸಂತಾಪ ಸೂಚಿಸುತ್ತೇವೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com