ಕಾಬುಲ್ ಸ್ಫೋಟ: ಭಾರತೀಯ ರಾಯಭಾರಿ ಕಚೇರಿಯ ಎಲ್ಲಾ ಸಿಬ್ಬಂದಿಗಳು ಸುರಕ್ಷಿತ- ಸುಷ್ಮಾ ಸ್ವರಾಜ್

ಕಾಬುಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಸ್ಫೋಟ ಸಂಭವಿಸಿದ್ದು, ರಾಯಭಾರಿ ಕಚೇರಿಯಲ್ಲಿದ್ದ ಎಲ್ಲಾ ಭಾರತೀಯ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್...
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ನವದೆಹಲಿ: ಕಾಬುಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಸ್ಫೋಟ ಸಂಭವಿಸಿದ್ದು, ರಾಯಭಾರಿ ಕಚೇರಿಯಲ್ಲಿದ್ದ ಎಲ್ಲಾ ಭಾರತೀಯ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ. 
ಸ್ಫೋಟ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇವರ ಅನುಗ್ರಹದಿಂದ ಎಲ್ಲಾ ಭಾರತೀಯ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆಂದು ಹೇಳಿದ್ದಾರೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಮನ್'ಪ್ರೀತ್ ವೊಹ್ರಾ ಅವರು, ರಾಯಭಾರಿ ಕಚೇರಿಯ ಕಟ್ಟಡದಿಂದ ಬಹಳ ಹತ್ತಿರದಲ್ಲೇ ಸ್ಫೋಟಿಸಲಾಗಿದೆ. ಸ್ಫೋಟ ಸಂಭವಿಸಿದ ಪರಿಣಾಮ ಕಟ್ಟಡದ ಹಾನಿಗೊಳಗಾಗಿದೆ. ಆದರೆ, ರಾಯಭಾರಿ ಕಚೇರಿಯಲ್ಲಿದ್ದ ನಮ್ಮ ಎಲ್ಲಾ ಸಿಬ್ಬಂದಿಗಳೂ ಸುರಕ್ಷಿತರಾಗಿದ್ದಾರೆಂದು ತಿಳಿಸಿದ್ದಾರೆ.
ಅಫ್ಘಾನಿಸ್ತಾನ ಸಾರ್ವಜನಿಕ ಆರೋಗ್ಯ ಸಚಿವಾಲಯ ಸ್ಫೋಟ ಕುರಿತಂತೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾರ್ ಬಾಂಬ್ ಸ್ಫೋಟಿಸಿರುವ ಶಂಕೆಗಳು ವ್ಯಕ್ತವಾಗಿದೆ. ಘಟನೆಯಲ್ಲಿ 60 ಮಂದಿಗೆ ಗಾಯಗಳಾಗಿವೆ ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com