ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಕೇಂದ್ರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ...
ಗೋವು
ಗೋವು
ನವದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ. 
ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಈ ನಡುವೆ ರಾಜಸ್ಥಾನ ಹೈಕೋರ್ಟ್ ನಿಂದ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದೇ ವೇಳೆ ಗೋ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. 
ಈ ಮಧ್ಯೆ ಕೇಂದ್ರ ಸರ್ಕಾರ ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಹೊರಡಿಸಿದ್ದ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿದೆ. ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿ, ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿದೆ. ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶಿಸುವುದು ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com