ಕೇರಳ: ಕರುವಿನ ತಲೆ ಕಡಿದ ಪ್ರಕರಣ ಸಂಬಂಧ 8 ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಗೋಹತ್ಯೆ ಕುರಿತಂತೆ ಕೇಂದ್ರ ಹೊರಡಿಸಿದ್ದ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿ ಕೇರಳದಲ್ಲಿ ಸಾರ್ವಜನಿಕವಾಗಿ ನಡೆಸಲಾಗಿದ್ದ ಕರು ಶಿರಚ್ಛೇದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕಣ್ಣೂರು: ಗೋಹತ್ಯೆ ಕುರಿತಂತೆ ಕೇಂದ್ರ ಹೊರಡಿಸಿದ್ದ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿ ಕೇರಳದಲ್ಲಿ ಸಾರ್ವಜನಿಕವಾಗಿ ನಡೆಸಲಾಗಿದ್ದ ಕರು ಶಿರಚ್ಛೇದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದೆ. 
ಗೋಹತ್ಯೆ ಕುರಿತಂತೆ ಕೇಂದ್ರದ ಆದೇಶಕ್ಕೆ ಕಿಡಿಕಾರಿದ್ದ ಕೇರಳ ರಾಜ್ಯ ಕಾಂಗ್ರೆಸ್ ನ ಯುವ ನಾಯಕ ರಜಿಲ್ ಮಕುಟ್ಟಿ, ಜೋಸೆ ಕಂದಥಿಲ್, ಕೆ. ಶರಪುದ್ದೀನ್ ಅವರು ಸಾರ್ವಜನಿಕವಾಗಿ ಕರುವಿನ ತಲೆ ಕಡಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆಗೆ ದೇಶದಾದ್ಯಂತ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು. 
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇರಳ ರಾಜ್ಯ ಸರ್ಕಾರದ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಇತರೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. 
ಕೇಂದ್ರ ಆದೇಶದ ವಿರುದ್ಧ ಕೇರಳದ ಕಣ್ಣೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ 18 ತಿಂಗಳ ಕರುವೊಂದನ್ನು ಸಾರ್ವಜನಿಕವಾಗಿಯೇ ಹತ್ಯೆ ಮಾಡಿದ್ದರು. 
ಪ್ರಕರಣ ಸಂಬಂಧ ಸ್ವತಃ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಖಂಡನೆ ವ್ಯಕ್ತಪಡಿಸಿದ್ದಾರೆ. ಇಂಥ ವಿವೇಚನೆ ಇಲ್ಲದ, ಸ್ವೀಕಾರಾರ್ಹವಲ್ಲದ, ಕ್ರೂರ ಕೃತ್ಯಗಳನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದರು. 
ಯುವ ಕಾಂಗ್ರೆಸ್ ಕಾರ್ಯಕರ್ತರು ಕರುವಿನ ಶಿರಚ್ಛೇದ ಮಾಡಿರುವ ವಿಡಿಯೋವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕುಮ್ಮನಮ್ ರಾಜಶೇಖರನ್ ಅವರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದರು. ಕ್ರೂರತೆಯ ಪರಾಕಾಷ್ಠೆ. ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕವಾಗಿ ಕರು ಹತ್ಯೆ ಮಾಡಿದ್ದಾರೆಂದು ಹೇಳಿಕೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com