ಕಳೆದ ಮೇ ತಿಂಗಳಿನಲ್ಲಿ ಪಾಕಿಸ್ತಾನ ಹಲವು ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ. ಮೇ.15, 16 ಮತ್ತು 17 ರಂದು ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗಳು ಗಡಿಯಲ್ಲಿದ್ದ ಸುಮಾರು 12 ಸಾವಿರಕ್ಕೂ ಹೆಚ್ಚು ಜನರ ಮೇಲೆ ಗಂಭೀರವಾದ ಪರಿಣಾಮ ಬೀರಿತ್ತು. ಮೇ.13 ರಂದು ನಾಗರಿಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ನಡೆಸಿದ ಅಪ್ರಚೋದಿತ ದಾಳಿಗೆ ಇಬ್ಬರು ನಾಗರಿಕರು ಬಲಿಯಾಗಿದ್ದರು. ಅಲ್ಲದೆ, ಮೂವರಿಗೆ ಗಂಭೀರವಾದ ಗಾಯಗಳಾಗಿದ್ದವು.