ವ್ಯಾಪಂ ಹಗರಣದಲ್ಲಿ ಕ್ಲೀನ್ ಚಿಟ್: ಸಿಎಂ ಶಿವರಾಜ್ ಸಿಂಗ್ ವಿರುದ್ಧ ಕಾಂಗ್ರೆಸ್ ನಿಂದ ಹೊಸ ದೂರು

ಬಹುಕೋಟಿ ವ್ಯಾಪಂ ಹಗರಣ ಪ್ರಕರಣ ಸಂಬಂಧ ಮದ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ...
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್
ನವದೆಹಲಿ: ಬಹುಕೋಟಿ ವ್ಯಾಪಂ ಹಗರಣ ಪ್ರಕರಣ ಸಂಬಂಧ ಮದ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್  ಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಿವರಾಜ್ ಸಿಂಗ್ ಚೌಹಾಣ್ ಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಹೊಸ ಕೇಸು ದಾಖಲಿಸಿದೆ.
ವಿಚಾರಣಾ ನ್ಯಾಯಾಲಯದಲ್ಲಿ  ಖಾಸಗಿ ದೂರು ದಾಖಲಿಸಿರುವುದಾಗಿ ಕಾಂಗ್ರೆಸ್ ಹೇಳಿದೆ. ಸಿಬಿಐ ತನಿಖಾಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕು, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಅಲ್ಲ, ಅದು ಕಾಂಪ್ರಮೈಸಡ್ ಬ್ಯೂರೋ ಇನ್ ವೆಸ್ಟಿಗೇಷನ್ ಎಂದು ಕಾಂಗ್ರೆಸ್ ವಕ್ತಾರ ಕಪಿಲ್ ಸಿಬಲ್ ಆರೋಪಿಸಿದ್ದಾರೆ.
ಲಭ್ಯವಿರುವ ಸಾಕ್ಷಿಗಳನ್ನು ಸಿಬಿಐ ಅಧಿಕಾರಿಗಳು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ದೂರಿದ್ದಾರೆ.ಹಗರಣಕ್ಕೆ ಸಂಬಂಧಿಸಿದಂತೆ ವ್ಯಾಪಂ ಕಚೇರಿಯಿಂದ ವಶಪಡಿಸಿಕೊಂಡಿದ್ದ ಹಾರ್ಡ್ ಡಿಸ್ಕ್ ನಲ್ಲಿ ಮುಖ್ಯಮಂತ್ರಿ ಚೌಹಾಣ್ ಹೆಸರಿರಲಿಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. 
ವ್ಯಾಪಂ ಕಚೇರಿಯಿಂದ ಈ ಹಿಂದೆ ವಶಪಡಿಸಿಕೊಂಡ 3 ಕಂಪ್ಯೂಟರ್ ಗಳ ಹಾರ್ಡ್ ಡಿಸ್ಕ್ ಗಳನ್ನು ವಿಧಿವಿಜ್ಞಾನ ತಜ್ಞರು ಪರಿಶೀಲಿಸಿದ್ದಾರೆ. ಅದನ್ನು ತಿರುಚಲಾಗಿಲ್ಲ. ಇದ್ದಿದ್ದನ್ನು ಇರುವ ಹಾಗೆಯೇ ನಾವು ಭೋಪಾಲ್ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆಂದು ಸಿಬಿಐ ತಿಳಿಸಿದೆ. 
ಮುಂದಿನ ವರ್ಷ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಿದ್ದು, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗೆ ಕ್ಲೀನ್ ಚಿಟ್ ನೀಡಿರುವುದರಿಂದ ಬಿಜೆಪಿಗೆ ತುಸು ನಿರಾಳ ತಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com