ರಾಯ್ ಬರೇಲಿ ಎನ್ ಟಿಪಿಸಿ ವಿದ್ಯುತ್ ಸ್ಥಾವರದ ಬಾಯ್ಲರ್ ಸ್ಫೋಟ: ಸಾವಿನ ಸಂಖ್ಯೆ 26ಕ್ಕೇರಿಕೆ!

ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು, ಇನ್ನೂ ಹಲವು ಸಿಬ್ಬಂದಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ.
ಎನ್ ಟಿಪಿಸಿ ವಿದ್ಯುತ್ ಸ್ಥಾವರದ ಬಾಯ್ಲರ್ ಸ್ಫೋಟ
ಎನ್ ಟಿಪಿಸಿ ವಿದ್ಯುತ್ ಸ್ಥಾವರದ ಬಾಯ್ಲರ್ ಸ್ಫೋಟ
ರಾಯ್ ಬರೇಲಿ: ಉತ್ತರಪ್ರದೇಶದ ರಾಯ್ ಬರೇಲಿಯ ರಾಷ್ಟ್ರೀಯ ಉಷ್ಣ ವಿದ್ಯುತ್ ಸ್ಥಾವರ ಎನ್ ಟಿಪಿಸಿಯ ಉಂಚಾಹರ್ ಘಟಕದಲ್ಲಿ ಸಂಭವಿಸಿದ್ದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 26ಕ್ಕೆ  ಏರಿಕೆಯಾಗಿದ್ದು, ಇನ್ನೂ ಹಲವು ಸಿಬ್ಬಂದಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ.
500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯದ ಉಷ್ಣ ವಿದ್ಯುತ್ ಸ್ಥಾವರ ಇದಾಗಿದ್ದು, ಹೆಚ್ಚಾದ ಒತ್ತಡದಿಂದಾಗಿ ಬಾಯ್ಲರ್ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಹಲವು ಸಿಬ್ಬಂದಿಗಳು  ಗಾಯಗೊಂಡಿದ್ದು. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.  ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು ಅಹೋರಾತ್ರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಕ್ಷಣಾ ಕಾರ್ಯಾಚಾರಣೆ ನಡೆಸುತ್ತಿರುವ ಸಿಬ್ಬಂದಿಗಳು ತಿಳಿಸಿರುವಂತೆ ಘಟನೆಯಲ್ಲಿ 66ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ 6ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದೆ.
ಸಂತ್ರಸ್ಥರಿಗೆ ಉತ್ತರ ಪ್ರದೇಶ ಸರ್ಕಾರದಿಂದ ಪರಿಹಾರ
ಇನ್ನು ಬಾಯ್ಲರ್ ಸ್ಫೋಟದಲ್ಲಿ ಸಾವಿಗೀಡಾದ ಮತ್ತು ಗಾಯಗೊಂಡ ಸಂತ್ರಸ್ಥರಿಗೆ ಉತ್ತರ ಪ್ರದೇಶ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ದುರಂತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ. ಗಂಭೀರವಾಗಿ ಗಾಯಗೊಂಡಿರುವವರಿಗೆ  50 ಸಾವಿರ ಹಾಗೂ ಸಣ್ಣಪುಟ್ಟ ಗಾಯಾಳುಗಳಿಗೆ 25 ಸಾವಿರ ಪರಿಹಾರವನ್ನು ಯೋಗಿ ಆದಿತ್ಯನಾಥ ಸರ್ಕಾರ ಘೋಷಿಸಿದೆ.  ಪ್ರಸ್ತುತ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು, ದೂರವಾಣಿ ಮೂಲಕ ದುರಂತದ ಬಗ್ಗೆ  ಮಾಹಿತಿ ಪಡೆದಿದ್ದು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಭೇಟಿ
ಇದೇ ವೇಳೆ 22 ಮಂದಿಯ ಸಾವಿಗೆ ಕಾರಣವಾದ ಎನ್ ಟಿಪಿಎಸ್ ವಿದ್ಯುತ್ ಸ್ಥಾವರಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com