ವಿಧ್ವಂಸಕ್ಕೆ ಉಗ್ರರ ಸಂಚು?: ಹೈದರಾಬಾದ್ ನಲ್ಲಿ ಭಾರಿ ಪ್ರಮಾಣದ ಸ್ಫೋಟಕ ವಶ, ಇಬ್ಬರ ಬಂಧನ

ಹೈದರಾಬಾದ್ ನಲ್ಲಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹೈದರಾಬಾದ್: ಹೈದರಾಬಾದ್ ನಲ್ಲಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿವೆ.
ಗುರುವಾರ ಮುಂಜಾನೆ ಹೈದರಾಬಾದ್ ನ ಹಯಾತ್ ನಗರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರರಿಂದ ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. 
ತಮಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಹೈದರಾಬಾದ್ ನ ಹಯಾತ್ ನಗರದಲ್ಲಿನ ಮನೆಯೊಂದರ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಇಬ್ಬರು ಶಂಕಿತ ಉಗ್ರರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ  ಸ್ಫೋಟಕಗಳು ಪತ್ತೆಯಾಗಿವೆ. ಮೂಲಗಳ ಪ್ರಕಾರ ಘಟನಾ ಸ್ಥಳದಲ್ಲಿ ಒಟ್ಟು 60 ಡಿಟೋನೇಟರ್ ಗಳು, 24 ಜಿಲೆಟಿನ್ ಕಡ್ಡಿಗಳು, 4 ಬ್ಯಾಟರಿಗಳು ಹಾಗೂ ಒಂದಷ್ಟು ವೈರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತೆಯೇ  ಪ್ರಕರಣ ಸಂಬಂಧ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ಸ್ಫೋಟಗಳ ಮೂಲಕ ಹೈದರಾಬಾದ್ ನಲ್ಲಿ ಅಥವಾ ದೇಶದ ಇತರೆಡೆ ಉಗ್ರರು ಭಾರಿ ವಿಧ್ವಂಸಕ್ಕೆ ಸಂಚು ರೂಪಿಸಿದ್ದರೇ ಎಂಬ ಆತಂಕ ಎದುರಾಗಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com