ನಾನು ಕ್ಲೀನ್ ಆಗಿದ್ದೆ, ಕ್ಲೀನ್ ಚಿಟ್ ನೀಡುವುದು ಅನಿರ್ವಾಯವಾಗಿತ್ತು: ಶಿವರಾಜ್ ಸಿಂಗ್ ಚೌಹಾಣ್

ನಾನು ಯಾವುದೇ ತಪ್ಪು ಮಾಡಿರಲಿಲ್ಲ, ನಾನು ಕ್ಲೀನ್ ಆಗಿದ್ದೆ, ಹೀಗಾಗಿ ಸಿಬಿಐ ಕ್ಲೀನ್ ಚಿಟ್ ನೀಡುವುದು ಅನಿವಾರ್ಯವಾಗಿತ್ತು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ...
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್
ಭೂಪಾಲ್: ನಾನು ಯಾವುದೇ ತಪ್ಪು ಮಾಡಿರಲಿಲ್ಲ,  ನಾನು ಕ್ಲೀನ್ ಆಗಿದ್ದೆ, ಹೀಗಾಗಿ ಸಿಬಿಐ ಕ್ಲೀನ್ ಚಿಟ್ ನೀಡುವುದು ಅನಿವಾರ್ಯವಾಗಿತ್ತು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬಹುಕೋಟಿ ವ್ಯಾಪಂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಿಬಿಐ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಸಾರ್ವಜನಿಕ ಜೀವನದಲ್ಲಿರುವಾಗ ಹಲವು ಆರೋಪಗಳು ಎದುರಾಗುತ್ತವೆ, ಆದರೆ ಆರೋಪಗಳು ಸತ್ಯದಿಂದ ಕೂಡಿರಬೇಕು. ಕೆಲವು ಆರೋಪಗಳು ವ್ಯಕ್ತಿಗೆ ನೋವು ತರುತ್ತವೆ.  ಆದರೆ ಅಂತಹ ಆರೋಪಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ವ್ಯಾಪಂ ಹಗರಣಕ್ಕೆ ಸಂಬಂಧಿಸಿದೆ ಸಿಬಿಐ ಆಧಿಕಾರಿಗಳು ಒಟ್ಟು 490 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ಪಟ್ಟಿಯಲ್ಲಿ ಶಿವರಾಜ್ ಸಿಂಗ್ ಅವರ ಹೆಸರನ್ನು ಕೈಬಿಟ್ಟಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ವ್ಯಾಪಂ ಕಚೇರಿಯಿಂದ ವಶಪಡಿಸಿಕೊಂಡಿದ್ದ ಹಾರ್ಡ್ ಡಿಸ್ಕ್ ನಲ್ಲಿ ಮುಖ್ಯಮಂತ್ರಿ ಚೌಹಾಣ್ ಹೆಸರಿರಲಿಲ್ಲ ಎಂದು ಸಿಬಿಐ ಭೂಪಾಲ್  ನ್ಯಾಯಾಲಯಕ್ಕೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com