ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ ಓರ್ವ ಉಗ್ರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಹತ್ಯೆಯಾದ ಉಗ್ರನನ್ನು ಬದಾರ್ ಎಂದು ಗುರ್ತಿಸಲಾಗಿದ್ದು, ಈತ ಪಾಕಿಸ್ತಾನದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವನಾಗಿದ್ದಾನೆಂದು ಶಂಕಿಸಲಾಗಿದೆ.