ದೂರಶಿಕ್ಷಣದ ಮುಖೇನ ಪಡೆದ ತಾಂತ್ರಿಕ ವಿದ್ಯಾಭ್ಯಾಸಕ್ಕೆ ಮಾನ್ಯತೆ ಇಲ್ಲ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೂರಶಿಕ್ಷಣ ಕೋರ್ಸುಗಳ ಮೂಲಕ ತಾಂತ್ರಿಕ ಶಿಕ್ಷಣವನ್ನು ನೀದಬಾರದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿತು.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ದೂರಶಿಕ್ಷಣ ಕೋರ್ಸುಗಳ ಮೂಲಕ ತಾಂತ್ರಿಕ ಶಿಕ್ಷಣವನ್ನು ನೀದಬಾರದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿತು. ಈ ವಿಷಯದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟ್ ಗಳು ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದು, ದೂರ ಶಿಕ್ಷಣದ ಮೂಲಕ ತಾಂತ್ರಿಕ ಪದವಿ ನೀಡಬಾರದೆಂದು ಎಂಬ ಅಭಿಪ್ರಾಯಕ್ಕೆ ಬಂದಿದೆ.
ಅಂಚೆ ಮುಖೇನ ತಾಂತ್ರಿಕ ಶಿಕ್ಷಣ ನೀಡಲು ಅನುವು ಮಾಡಿಕೊಟ್ಟಿದ್ದ ಒಡಿಶಾ ಹೈ ಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. 
ದೂರ ಶಿಕ್ಷಣದ ಮೂಲಕ ಪಡೆದ ಕಂಪ್ಯೂಟರ್ ಪದವಿ ಯನ್ನು ನಿಯತವಾಗಿ ತರಗತಿಗೆ ಹಾಜರಾಗಿ ಪಡೆದ ಪದವಿಯೊಡನೆ ಪರಿಗಣಿಸಲು ಬರುವುದಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟ್ ಗಳು ಎರಡು ವರ್ಷಗಳ ಹಿಂದೆ ತೀರ್ಪು ಪ್ರಕಟಿಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com