ಇದೇ ವರದಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ವಿರುದ್ಧ ಕಿಡಿಕಾರಿದೆ. ಶೌರ್ಯ ದೋವಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಂ ಮಾಧವ್ ಜತೆಯಾಗಿ ನಿರ್ವಹಿಸುತ್ತಿರುವ ಇಂಡಿಯಾ ಫೌಂಡೇಶನ್ ನಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸುರೇಶ್ ಪ್ರಭು, ಜಯಂತ್ ಸಿನ್ಹಾ ಮತ್ತು ಎಂಜೆ ಅಕ್ಬರ್ ಸಹ ನಿರ್ದೇಶಕರಾಗಿದ್ದು ಇವರನ್ನು ವಜಾ ಮಾಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.