ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮದ ರಾಜ್‍ಪೋರಾದಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಭಯೋತ್ಪಾದಕರ ದಾಳಿ ನಡೆದ ಬೆನ್ನಲ್ಲೇ ಎಚ್ಚೆತ್ತ ಸೇನಾ ಪಡೆ ಪ್ರತಿ ದಾಳಿ ನಡೆಸಿದ್ದು ಗುಂಡಿನ ಚಕಮಕಿ ನಡೆಯುತ್ತಿದೆ. ಇದೇ ವೇಳೆ ಭಯೋತ್ಪಾದಕರು ಶೋಪಿಯಾನ್ ಜಿಲ್ಲೆಯಲ್ಲಿ ಇಮಾಮ್ ಸಾಹಬ್ ನಲ್ಲಿರುವ ಪೊಲೀಸರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದಾರೆ.
ಇದಕ್ಕೂ ಮುನ್ನ ಗುರುವಾರ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಯೋರ್ವ ಯೋಧ ಹುತಾತ್ಮರಾಗಿದ್ದರು, ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿತ್ತು.