ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಬಳಲುತ್ತಿರುವ ಬಗ್ಗೆ ಮಾಹಿತಿ ಪಡೆದ ಓಂಕಾರ್ ಅವರು ಅಟೆಂಡೆರ್ ಒಬ್ಬರ ಜತೆ ಸರಿಗೆಟಾ ಗ್ರಾಮಕ್ಕೆ ದೌಡಾಯಿಸಿದರು. ಗರ್ಭೀಣಿಗೆ ಅದಾಗಲೇ ಅತಿಯಾದ ರಕ್ತಸ್ರಾವವಾಗಿದ್ದರಿಂದ ಗ್ರಾಮದಲ್ಲೇ ವೈದ್ಯರು ಆಕೆಗೆ ಹೆರಿಗೆ ಮಾಡಿಸಿದರು. ಹೆರಿಗೆ ನಂತರ ಆಕೆಯ ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ತೀರ್ಮಾನಿಸಿದರು.