ಜಮ್ಮು ಮತ್ತು ಕಾಶ್ಮೀರ: ಗಡಿ ನುಸುಳಲು ಯತ್ನ- ಇಬ್ಬರು ಉಗ್ರರನ್ನು ಸಡೆಬಡಿದ ಸೇನೆ
ಉತ್ತರ ಕಾಶಅಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಭಾನುವಾರ ಹತ್ಯೆ ಮಾಡಿದೆ...
ಶ್ರೀನಗರ: ಉತ್ತರ ಕಾಶಅಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಭಾನುವಾರ ಹತ್ಯೆ ಮಾಡಿದೆ.
ಇಂದು ಬೆಳಿಗ್ಗೆ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಸೇನಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಸ್ತುತ ಗಡಿ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.