ದೇಶ

ನಮ್ಮ ಸರ್ಕಾರ ಸಬ್ಸಿಡಿ ಸೋರಿಕೆ ತಡೆಗಟ್ಟಿದ್ದನ್ನು ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ: ಮೋದಿ

ಸಬ್ಸಿಡಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ನಮ್ಮ ಸರ್ಕಾರ ಸಬ್ಸಿಡಿ ಸೋರಿಕೆಯನ್ನು ತಡೆಗಟ್ಟಿದ್ದನ್ನು ಕಾಂಗ್ರೆಸ್ ಗೆ ಸಹಿಸಲು ಸಾಧ್ಯವಾಗುತ್ತಿಲ್ಲ

ನಮ್ಮ ಸರ್ಕಾರ ಸಬ್ಸಿಡಿ ಸೋರಿಕೆ ತಡೆಗಟ್ಟಿದ್ದನ್ನು ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ: ಮೋದಿ
ನರೇಂದ್ರ ಮೋದಿ
Published On :
ಹಿಮಾಚಲ ಪ್ರದೇಶ: ಸಬ್ಸಿಡಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ನಮ್ಮ ಸರ್ಕಾರ ಸಬ್ಸಿಡಿ ಸೋರಿಕೆಯನ್ನು ತಡೆಗಟ್ಟಿದ್ದನ್ನು ಕಾಂಗ್ರೆಸ್ ಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. 
ಸಬ್ಸಿಡಿ ಹೆಸರಿನಲ್ಲಿ ಈ ಹಿಂದೆ ಕೊಳ್ಳೆಹೊಡೆಯಲಾಗುತ್ತಿತ್ತು. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ 57,000 ಕೋಟಿ ರೂಪಾಯಿ ನಷ್ಟ ಉಂಟಾಗುತ್ತಿತ್ತು. ಆದರೆ ನಮ್ಮ ಸರ್ಕಾರ ಬಂದ ನಂತರ 57,000 ಕೋಟಿ ರೂಪಾಯಿಗಳನ್ನು ಉಳಿತಾಯ ಮಾಡಿದೆ. ಇದನ್ನು ಕಾಂಗ್ರೆಸ್ ನವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಮೋದಿ ಹಿಮಾಚಲ ಪ್ರದೇಶ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ. 
ಕೇಂದ್ರದಿಂದ 1 ರೂಪಾಯಿ ಅನುದಾನ ನೀಡಿದರೆ ಗ್ರಾಮಗಳಿಗೆ ತಲುಪುವ ವೇಳೆಗೆ ಅದು 15 ಪೈಸೆಯಾಗಿರುತ್ತದೆ ಎಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೇಳಿದ್ದರು. ಭ್ರಷ್ಟಾಚಾರದ ಸಮಸ್ಯೆಯ ಮೂಲವನ್ನು ಕಂಡುಹಿಡಿದಿದ್ದ ರಾಜೀವ್ ಗಾಂಧಿ ಅದನ್ನು ಬಗೆಹರಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲ, ಆದರೆ ನಮ್ಮ ಸರ್ಕಾರ ಒಂದು ರೂಪಾಯಿ ನೀಡಿದರೆ ಒಂದೇ ರೂಪಾಯಿ ಗ್ರಾಮಗಳಿಗೆ ತಲುಪುವಂತೆ ಮಾಡಿದೆ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.