ಅಹಮದಾಬಾದ್: ಗುಜರಾತ್ ನ ಜುನಗಢ ಜಿಲ್ಲೆಯಲ್ಲಿ ಚಿರತೆ ದಾಳಿಯಿಂದಾಗಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಎರಡು ಪ್ರತ್ಯೇಕ ಘಟನೆ ಸೋಮವಾರ ನಡೆದಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
ಗಿರ್ ಅರಣ್ಯ ವಿಭಾಗದ ಮೆಂದಾರ್ಡ್ ಗ್ರಾಮದಲ್ಲಿ ಚಿರತೆ ದಾಳಿಯಿಂದಾಗಿ 50 ವರ್ಷದ ಮುಕಾಬೇನ್ ಕನಾನಿ ಎಂಬ ಮಹಿಳೆ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇಂದು ಬೆಳಗಿನ ಗುಡಿಸಲಿನಲ್ಲಿ ಮಲಗಿದ್ದ ಕನಾನಿ ಅವರು ಚಿರತೆ ಎಳೆದೊಯ್ದು ಸಾಯಿಸಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರದೀಪ್ ಸಿಂಗ್ ಅವರು ತಿಳಿಸಿದ್ದಾರೆ.
ಇನ್ನು ಗಿರ್-ಸೋಮನಾಥ್ ಅರಣ್ಯ ವಿಭಾಗದ ಮಲಿಯಾ ಗ್ರಾಮದಲ್ಲೂ ಚಿರತೆ ದಾಳಿ ನಡೆಸಿದ್ದು, 70 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಈ ಎರಡು ನರಭಕ್ಷಕ ಚಿರತೆಗಳ ಹಿಡಿಯಲು ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸಿಂಗ್ ಅವರು ತಿಳಿಸಿದ್ದಾರೆ.