ಖಾಸಗಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕು: ನಿತೀಶ್ ಕುಮಾರ್

ಖಾಸಗಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕು ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ...
ನಿತೀಶ್ ಕುಮಾರ್
ನಿತೀಶ್ ಕುಮಾರ್
Updated on
ಪಾಟ್ನಾ: ಖಾಸಗಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕು ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ.
ಹಿಂದುಳಿದ ವರ್ಗಗಳಿಗೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡದ ಹೊರತು ಸಂಸ್ಥೆಯೊಂದಿಗೆ ಉದ್ಯೋಗ ಆಕಾಂಕ್ಷಿಗಳು ಯಾವುದೇ ಒಪ್ಪಂದಕ್ಕೂ ಸಹಿ ಹಾಕಬಾರದು ಎಂದು ನಿತೀಶ್ ಕುಮಾರ್ ಸೂಚಿಸಿದ್ದಾರೆ. ಇನ್ನು ವರ್ಷದ ಆರಂಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ, ಖಾಸಗಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವದರ ಕುರಿತು ಕಾನೂನು ಜಾರಿ ಮಾಡುವಂತೆ ಸೂಚಿಸಿತ್ತು. ಆದರೆ ಕೇಂದ್ರ ಸರ್ಕಾರ ಇದನ್ನು ತಿರಸ್ಕರಿಸಿತ್ತು. 
ಖಾಸಗಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಶೇ 27ರಷ್ಟು ಉದ್ಯೋಗಗಳನ್ನು ಮೀಸಲು ಇಡಬೇಕು ಎಂದು ಆಯೋಗ ಹೇಳಿತ್ತು. ಇದಕ್ಕೆ ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಖಾಸಗಿ ಸಂಸ್ಥೆಗಳು ಸ್ವಯಂ ಪ್ರೇರಣೆಯಿಂದ ಎಸ್ಸಿ, ಎಸ್ಟಿ, ಮತ್ತು ಓಬಿಸಿ ವರ್ಗದವರಿಗೆ ಉದ್ಯೋಗಗಳನ್ನು ಮೀಸಲಿಡಬೇಕು ಎಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com