ಮೂಲಗಳ ಪ್ರಕಾರ ಎಂಕೆ ಸ್ಟಾಲಿನ್ ನೇತೃತ್ವದಲ್ಲಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಡಿಎಂಕೆ ಪಕ್ಷ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಲು ಮುಂದಾಗಿತ್ತು. ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ನಾಗಪಟ್ಟಣಂ, ಕಡಲೂರು, ತಿರುವರೂರು, ತಿರುವಣ್ಣಾಮಲೈ ಮತ್ತು ವೆಲ್ಲೂರ್ ನಲ್ಲಿ ಡಿಎಂಕೆ ಬೃಹತ್ ಪ್ರತಿಭಟನಾ ರ್ಯಾಲಿಗೆ ಸಿದ್ಧತೆ ನಡೆಸಿಕೊಂಡಿತ್ತು. ಆದರೆ ಕಳೆದೊಂದು ವಾರದಿಂದ ಸುರಿದ ಮಳೆಯಿಂದಾಗಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೇ ಕಾರಣಕ್ಕೆ ಡಿಎಂಕೆ ಮುಖಂಡರು ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.